Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾಜ್ಯಾ ಪ್ರಿತಿಚ್ಯಾ ದೊಸ್ತಾ, ತಿಯಾ ತುಜ್ಯಾ ವಾಂಗುಡ್ಚ್ಯಾ ವಿಶ್ವಾಸಾತ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಅನಿ ವಿಶ್ವಾಸ್ ನತ್ತ್ಯಾ ಲೊಕಾಂಚ್ಯಾ ಮದ್ದಿ ನಿಯತ್ತಿನ್ ರಾಬುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:5
13 ತಿಳಿವುಗಳ ಹೋಲಿಕೆ  

ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.


ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು