Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಅವರು ಕ್ರಿಸ್ತನ ಹೆಸರನ್ನು ಪ್ರಸಿದ್ಧಿಪಡಿಸುವದಕ್ಕೋಸ್ಕರ ಹೊರಟುಹೋಗಿದ್ದಾರೆ ಮತ್ತು ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಸಹೋದರರು ಕ್ರಿಸ್ತನ ಸೇವೆಗಾಗಿ ಪ್ರವಾಸಹೊರಟಿದ್ದಾರೆ. ಅವಿಶ್ವಾಸಿಗಳಿಂದ ಅವರು ಯಾವ ಸಹಾಯವನ್ನೂ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅವರು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ. ಅವಿಶ್ವಾಸಿಗಳಿಂದ ಏನೂ ತೆಗೆದುಕೊಳ್ಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ತೆನಿ ಜಾತಾನಾ ವಿಶ್ವಾಸ್ ಕರಿನಸಲ್ಲ್ಯಾ ಲೊಕಾಂಚ್ಯಾಕ್ನಾ ಕಸ್ಲಿಬಿ ಮಜತ್ ಗಾವ್ಚೆ ಮನುನ್ ಆಶಾ ಕರಿನಸ್ತಾನಾ ಕ್ರಿಸ್ತಾಚ್ಯಾ ನಾವಾನ್ ಪ್ರಯಾನ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:7
17 ತಿಳಿವುಗಳ ಹೋಲಿಕೆ  

ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು.


ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು