Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:8 - ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನಾವು ಈ ಸಹೋದರರಿಗೆ ಸಹಾಯ ಮಾಡಬೇಕು. ನಾವು ಅವರಿಗೆ ಸಹಾಯಮಾಡಿದಾಗ, ಸತ್ಯಕ್ಕೋಸ್ಕರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುಗಾರರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಸೆ ರ್‍ಹಾತಾನಾ ಅಮಿ ಹ್ಯಾ ಲೊಕಾಕ್ನಿ ಮಜತ್ ಕರ್ತಲೊ ಅಮ್ಚೊ ಖಾಯ್ದೊ. ಹೆಚ್ಯಾ ವೈನಾ ಖರೆ ಕಾಯ್ ಹಾಯ್ ತೆ ಪ್ರಚಾರ್ ಕರ್ತಲ್ಯಾ ಕಾಮಾಕ್ ಅಮಿಬಿ ತೆಂಚ್ಯಾ ವಾಂಗ್ಡಾ ಎಕ್ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:8
17 ತಿಳಿವುಗಳ ಹೋಲಿಕೆ  

ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಯುಸ್ತನೆನಿಸಿಕೊಳ್ಳುವ ಯೇಸು ಕೂಡ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ. ಕ್ರೈಸ್ತರಾದ ಯೆಹೂದ್ಯರಲ್ಲಿ ಇವರೇ ನನ್ನೊಡನೆ ದೇವರ ಸಾಮ್ರಾಜ್ಯದ ಏಳಿಗೆಗಾಗಿ ದುಡಿಯುತ್ತಿರುವವರು. ಇವರಿಂದ ನನಗೆ ತುಂಬಾ ಆದರಣೆ ದೊರಕಿದೆ.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ?


“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.


ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.


ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.


ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು