Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:10 - ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತರ ನಿಂತುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಶೆ ಚಡುನ್ಗೆತ್ ಜಾತಾನಾ ಅನಿ ತೆನಿ ಮಳ್ಬಾಕುಚ್ ನದರ್ ಲಾವ್ನ್ ರ್‍ಹಾತಾನಾ ಪಾಂಡ್ರೆ ಕಪ್ಡೆ ನೆಸಲ್ಲೆ ದೊಗೆ ಜನಾ ಎಗ್ದಮ್ ತೆಂಚ್ಯಾಕ್ಡೆ ಯೆವ್ನ್ ಇಬೆ ರ್‍ಹಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:10
12 ತಿಳಿವುಗಳ ಹೋಲಿಕೆ  

ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು