Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:11 - ಕನ್ನಡ ಸತ್ಯವೇದವು C.L. Bible (BSI)

11 “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತೆನಿ ಮನುಕ್ ಲಾಗ್ಲೆ, “ಗಾಲಿಲಿಯಾಚ್ಯಾ ಮಾನ್ಸಾನು, ತುಮಿ ಅಶೆ ಮಳ್ಬಾಕ್ ನದರ್ ಲಾವ್ನ್ ಘೆವ್ನ್ ಕಶ್ಯಾಕ್ ಇಬೆ ರ್‍ಹಾಲ್ಯಾಶಿ? ಹ್ಯೊ ತುಮ್ಚ್ಯಾ ಮದ್ಲೊ ವೈರ್ ಉಕ್ಲುನ್ ಘೆವ್ನ್ ಹೊಲ್ಲೊ ಜೆಜು, ಕಸೊ ತುಮಿ ತೆಕಾ ಸರ್ಗಾರ್ ಚಡುನ್ ಜಾತಾನಾ ಬಗುಕ್ ಲಾಗ್ಲ್ಯಾಸಿ ತೆಸೊಚ್ ಅನಿ ಪರ್ತುನ್ ತೊ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:11
23 ತಿಳಿವುಗಳ ಹೋಲಿಕೆ  

ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು.


ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.


ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?


ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ?


ಸ್ವಲ್ಪ ಹೊತ್ತಾದ ಮೇಲೆ ಅಲ್ಲಿದ್ದವರು ಪೇತ್ರನಿಗೆ, “ಖಂಡಿತವಾಗಿ ನೀನು ಅವರಲ್ಲಿ ಒಬ್ಬನು. ಏಕೆಂದರೆ, ನೀನೂ ಗಲಿಲೇಯದವನೇ,” ಎಂದರು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು