Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:12 - ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಅವರು ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಿಂದ ಯೆರೂಸಲೇವಿುಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇವಿುಗೂ ಸಬ್ಬತ್‍ದಿನದಲ್ಲಿ ಪ್ರಯಾಣಮಾಡುವಷ್ಟು ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ತೆನಿ ಒಲಿವೆತ್ ಮನುನ್ ನಾಂವ್ ಹೊತ್ತ್ಯಾ ಮಡ್ಡಿ ವೈನಾ ಜೆರುಜಲೆಮಾಕ್ ಫಾಟಿ ಯೆಲ್ಯಾನಿ ಜೆರುಜಲೆಮಾತ್ನಾ ಒಲಿವೆತ್ ಲೈ ಧುರ್ ನಾ, ಲೈ ಲೈ ಮಟ್ಲ್ಯಾರ್ ಅರ್‍ದೊ ಮೈಲ್ ಧುರ್ ಅಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:12
10 ತಿಳಿವುಗಳ ಹೋಲಿಕೆ  

ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.


ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು.


ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.


ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊಮೀಟರು ದೂರದಲ್ಲಿದೆ.


ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು,


ಈ ನಿಮ್ಮ ಪಲಾಯನ ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಸಂಭವಿಸದಂತೆ ಪ್ರಾರ್ಥನೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು