Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:14 - ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರೆಲ್ಲರು ಏಕಮನಸ್ಸಾಗಿ ದೇವರ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಕೆಲವು ಮಂದಿ ಹೆಂಗಸರೂ ಯೇಸುವಿನ ತಾಯಿಯಾದ ಮರಿಯಳೂ ಆತನ ತಮ್ಮಂದಿರೂ ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಜೆಜುಚೆ ಬಾಯ್ ಮರಿ ಮಿಳುನ್ ಅನಿ ಉಲ್ಲಿ ಬಾಯ್ಕಾಮಾನಸ್ಸಾ ಅನಿ ಜೆಜುಚಿ ಭಾವಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ. ಅಶೆ ತೆನಿ ಎಕ್ ಮನಾನ್ ಗೊಳಾ ಹೊವ್ನ್ ಮಾಗ್ನಿ ಕರಿತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:14
27 ತಿಳಿವುಗಳ ಹೋಲಿಕೆ  

ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿಮಾಡಿಕೊಂಡಿದ್ದರು.


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.


ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ, ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ದಿಯನ್ನು ತಿಳಿಸಿದರು.


ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.


ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.


ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.


ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು.


ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.


ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು