Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:15 - ಕನ್ನಡ ಸತ್ಯವೇದವು C.L. Bible (BSI)

15 ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾಚ್ ದಿಸಾತ್ನಿ ಸುಮಾರ್ ಎಕ್ಸೆವಿಸ್ ಜನಾ ವಿಶ್ವಾಸಾತ್ ಹೊತ್ತಿ ಲೊಕಾ ಜಮಲ್ಲ್ಯಾ ಎಳಾರ್ ಪೆದ್ರು ತೆಂಚ್ಯಾ ಮದ್ದಿ ಇಬೆ ರ್‍ಹಾವ್ನ್ ಅಶೆ ಮನುಕ್ ಲಾಗ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:15
31 ತಿಳಿವುಗಳ ಹೋಲಿಕೆ  

ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.


ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.


ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು.


ಪೌಲ ಮತ್ತು ಸೀಲ ಸೆರೆಮನೆಯಿಂದ ಹೊರಟು ಲಿಡಿಯಳ ಮನೆಗೆ ಹೋದರು. ಭಕ್ತವಿಶ್ವಾಸಿಗಳನ್ನು ಸಂಧಿಸಿ ಅವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿ ಅಲ್ಲಿಂದ ನಿರ್ಗಮಿಸಿದರು.


ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.


ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.


ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.


ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.


ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.


ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.


ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು