ಅಪೊಸ್ತಲರ ಕೃತ್ಯಗಳು 1:16 - ಕನ್ನಡ ಸತ್ಯವೇದವು C.L. Bible (BSI)16 “ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16-17 “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಭಾವಾನು ಅನಿ ಭೆನಿಯಾನು ದಾವಿದಾಚ್ಯಾ ತೊಂಡಾತ್ನಾ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಚ್ಯಾ ವಿಶಯಾತ್ ಲಿವಲ್ಲೆ ಖರೆ ಹಾಯ್. ಅಧ್ಯಾಯವನ್ನು ನೋಡಿ |