Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:4 - ಕನ್ನಡ ಸತ್ಯವೇದವು C.L. Bible (BSI)

4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಹೀಗಿರಲಾಗಿ ಆತನು ಅವರೊಂದಿಗೆ ಕೂಡಿದ್ದಾಗ್ಗೆ ಅವರಿಗೆ - ಯೋಹಾನನಂತೂ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ನಿಮಗಾದರೋ ಇನ್ನು ಸ್ವಲ್ಪ ದಿವಸಗಳೊಳಗಾಗಿ ಪವಿತ್ರಾತ್ಮದಲ್ಲಿ ಸ್ನಾನವಾಗುವದು. ಆದಕಾರಣ ನೀವು ಯೆರೂಸಲೇಮನ್ನು ಬಿಟ್ಟು ಹೋಗದೆ ತಂದೆ ಮಾಡಿದಂಥ ನೀವು ನನ್ನಿಂದ ಕೇಳಿದಂಥ ವಾಗ್ದಾನಕ್ಕೆ ಕಾದುಕೊಂಡಿರ್ರಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಎಗ್ದಾ ತಸಿ ಎಕಾಕ್ಡೆ ತೊ ತೆಂಚ್ಯಾ ವಾಂಗ್ಡಾ ಜೆವಾನ್ ಕರುಕ್ ಲಾಗಲ್ಲೊ ತೆನಿ ತೆಂಕಾ ಅಶೆ ತಾಕಿತ್ ದಿಲ್ಯಾನ್ ಜೆರುಜಲೆಮ್ ಸೊಡುನ್ ಜಾವ್‍ನಕಾಶಿ , ಖರೆ ಮಾಜ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಭೊಮಾನಾಚಿ ವಾಟ್ ರಾಕಾ, ಹೆಚ್ಯಾ ವಿಶಯಾತ್ ಮಿಯಾ ಬೊಲ್ತಾನಾ ತುಮಿ ಆಯಿಕ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:4
14 ತಿಳಿವುಗಳ ಹೋಲಿಕೆ  

ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು