Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:9 - ಕನ್ನಡ ಸತ್ಯವೇದವು C.L. Bible (BSI)

9 ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜುನ್ ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ತೆನಿ ಬಗುನ್ಗೆತ್ ರ್‍ಹಾತಾನಾಚ್ ತೆಕಾ ವೈರ್ ಉಕ್ಲುನ್ ನ್ಹೆವ್ನ್ ಹೊಲೆ ಅನಿ ತೆಂಚ್ಯಾ ಡೊಳ್ಯಾಂಚ್ಯಾ ಇದ್ರಾಕ್ನಾ ತೆಕಾ ಮೊಡಾನ್ ನಿಪ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:9
17 ತಿಳಿವುಗಳ ಹೋಲಿಕೆ  

ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.


ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು