Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:10 - ಕನ್ನಡ ಸತ್ಯವೇದವು C.L. Bible (BSI)

10 ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕು ಎನಿಸಿತು. ಊಟ ಸಿದ್ಧವಾಗುತ್ತಿದ್ದಂತೆ, ಪೇತ್ರನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಬಹಳ ಹಸಿದು ಊಟ ಮಾಡಬೇಕೆಂದಿದ್ದನು. ಊಟಕ್ಕೆ ಸಿದ್ಧವಾಗುತ್ತಿರುವಷ್ಟರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೇತ್ರನಿಗೆ ಹಸಿವೆಯಾಗಿ ಊಟಮಾಡಬೇಕೆನಿಸಿತು. ಅಲ್ಲಿ ಅವನಿಗಾಗಿ ಅಡಿಗೆ ಮಾಡುತ್ತಿದ್ದರು. ಇತ್ತ, ಪೇತ್ರನಿಗೊಂದು ದರ್ಶನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕೆನಿಸಿತು. ಊಟ ಸಿದ್ಧತೆಯಾಗುತ್ತಿದ್ದಾಗ ಅವನು ಧ್ಯಾನ ಪರವಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪೆದ್ರುಕ್ ಬುಕ್ ಲಾಗುನ್ ಜೆವಾನ್ ಕರುಚೆ ಸಾರ್ಕೆ ದಿಸ್ಲೆ, ಥೈ ತೆಚ್ಯಾ ಸಾಟ್ನಿ ರಾಂದುಗೆತ್ ಹೊತ್ತೆ ತನ್ನಾ ಪೆದ್ರುಕ್ ಎಕ್ ದರ್ಶನ್ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:10
13 ತಿಳಿವುಗಳ ಹೋಲಿಕೆ  

“ನಾನು ಜೆರುಸಲೇಮಿಗೆ ಹಿಂದಿರುಗಿ ಒಂದು ದಿನ ಮಹಾದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಾ ಧ್ಯಾನಪರವಶನಾದೆ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಮಾರನೆಯ ದಿನ ಬೆಳಿಗ್ಗೆ ಯೇಸುಸ್ವಾಮಿ ಪುನಃ ಪಟ್ಟಣಕ್ಕೆ ಬರುತ್ತಿದ್ದಾಗ ಅವರಿಗೆ ಹಸಿವಾಯಿತು.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು