Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:14 - ಕನ್ನಡ ಸತ್ಯವೇದವು C.L. Bible (BSI)

14 ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಪೇತ್ರನು - ಬೇಡವೇ ಬೇಡ ಸ್ವಾಮೀ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ ಅಶುದ್ಧಪದಾರ್ಥವನ್ನಾಗಲಿ ತಿಂದವನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಪೆದ್ರುನ್ “ಧನಿಯಾ ಮಿಯಾ ತಸೆ ಕರಿನಾ! ಭ್ರಸ್ಟ್ ಹೊಲ್ಲೆ ಅನಿ ಅಶುದ್ದ್ ಅಸಲ್ಲೆ ಮಿಯಾ ಕನ್ನಾಬಿ ಖಾಲ್ಲೊ ನ್ಹಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:14
19 ತಿಳಿವುಗಳ ಹೋಲಿಕೆ  

ನೀವು ಶುದ್ಧಾಶುದ್ಧ ಜಂತುಗಳನ್ನು ಪಕ್ಷಿಗಳನ್ನು ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪ್ರಾಣಿಪಕ್ಷಿ ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು.


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು.


ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.


ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”


ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.


ಅದಕ್ಕೆ ಲೋಟನು, “ಸ್ವಾಮೀ ಅದು ನನ್ನಿಂದಾಗದು;


ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.


ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.


ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?


ಅಲ್ಲದೆ, “ಪೇತ್ರಾ, ಏಳು, ಕೊಯ್ದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು.


ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು