Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:2 - ಕನ್ನಡ ಸತ್ಯವೇದವು C.L. Bible (BSI)

2 ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯೊ ಕೊರ್ನೆಲ್ ದೆವಸ್ಪಾನಾಚೊ ಮಾನುಸ್ ಹೊವ್ನ್ ಹೊತ್ತೊ, ತೊ ಅನಿ ತೆಚ್ಯಾ ಘರಾತ್ಲಿ ಸಗ್ಳಿ ಲೊಕಾ ದೆವಾಕ್ ಆರಾದನ್ ಕರಿತ್, ತೊ ಬರ್‍ಯಾ ಮನಾನ್ ಗರಿಬಾಕ್ನಿ ದಾನ್ ಧರ್ಮ್ ಕರಿತ್ ಹೊತ್ತೊ, ಅನಿ ಕನ್ನಾಬಿ ದೆವಾಕ್ಡೆ ಮಾಗ್ನಿ ಕರಿತ್ ರ್‍ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:2
51 ತಿಳಿವುಗಳ ಹೋಲಿಕೆ  

ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.


ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು