Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:20 - ಕನ್ನಡ ಸತ್ಯವೇದವು C.L. Bible (BSI)

20 ಸಿದ್ಧವಾಗಿ ಕೆಳಕ್ಕೆಹೋಗು. ನಾನೇ ಅವರನ್ನು ಕಳುಹಿಸಿರುವುದರಿಂದ ಸಂಕೋಚಪಡದೆ ಅವರೊಡನೆ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು, ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನೆದ್ದು ಕೆಳಗಿಳಿದು ಅವರೊಂದಿಗೆ ಹೋಗು. ಯಾವ ಪ್ರಶ್ನೆಗಳನ್ನೂ ಕೇಳಬೇಡ. ನಾನೇ ಅವರನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎದ್ದೇಳು, ಕೆಳಗಿಳಿದು ಹೋಗು. ಅವರ ಜೊತೆಯಲ್ಲಿ ಹೋಗಲು ಹಿಂಜರಿಯಬೇಡ, ನಾನೇ ಅವರನ್ನು ಕಳುಹಿಸಿರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಿಯಾ ಉಟುನ್ ಖಾಲ್ತಿ ಉತ್ರುನ್ ತೆಂಚ್ಯಾ ವಾಂಗ್ಡಾ ಜಾ, ಪಾಟಿ ಸರ್ಕುನಕ್ಕೊ ಅನಿ ಜವಾಬ್ ಇಚಾರುನಕ್ಕೊ , ಮಿಯಾಚ್ ತೆಂಕಾ ತುಜ್ಯಾಕ್ಡೆ ಧಾಡುನ್ ದಿಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:20
11 ತಿಳಿವುಗಳ ಹೋಲಿಕೆ  

ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).


ಪೇತ್ರನು ಕೆಳಕ್ಕೆ ಹೋಗಿ ಆ ಜನರನ್ನು ನೋಡಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ. ನೀವು ಬಂದ ಕಾರಣವೇನು?” ಎಂದು ವಿಚಾರಿಸಿದನು.


ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.


ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು