ಅಪೊಸ್ತಲರ ಕೃತ್ಯಗಳು 10:22 - ಕನ್ನಡ ಸತ್ಯವೇದವು C.L. Bible (BSI)22 “ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತ್ಯಾ ಲೊಕಾನಿ, ಕೊರ್ನೆಲ್ ಮನ್ತಲೊ ಎಕ್ ಶತಾದಿಪತಿ ಹೊತ್ತೊ, ತೊ ಧಾರ್ಮಿಕ್ ಮಾನುಸ್ ,ಅನಿ ದೆವಾಕ್ ಆರಾದನ್ ಕರ್‍ತಲೊ ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ತೆಕಾ ಮಾನ್ ದಿತ್ಯಾತ್, ತುಕಾ ಅಪ್ಲ್ಯಾ ಘರಾಕ್ ಬಲ್ವುನ್ ತಿಯಾ ಸಾಂಗ್ತಲಿ ಸಂಗ್ತಿಯಾ ಆಯ್ಕುಚೆ ಮನುನ್ ದೆವಾಚ್ಯಾ ದುತಾನ್ ಕೊರ್ನೆಲಾಕ್ ಕಳ್ವುಲ್ಯಾನ್, ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |