Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಕೊರ್ನೆಲಾನ್, “ತಿನ್ ದಿಸಾಂಚ್ಯಾ ಫಾಟ್ಲ್ಯಾ ದಿಸಿ, ಮಿಯಾ ಮಾಜ್ಯಾ ಘರಾತ್ ಮಾಗ್ನಿ ಕರಿತ್ ಹೊತ್ತೊ, ತನ್ನಾ ಸುಮಾರ್ ದೊಪಾರ್ಚೆ ತಿನ್ ಗಂಟೆ ಯೆಳ್ ಹೊಲ್ಲೊ, ಎಗ್ದಮ್ ಮಾಜ್ಯಾ ಫಿಡ್ಯಾತ್ ಎಕ್ ಮಾನುಸ್ ಯೆವ್ನ್ ಇಬೆ ರ್‍ಹಾಲೊ ತೆನಿ ನೆಸಲ್ಲೆ ಕಪ್ಡೆ ಉಜ್ವೊಡಾ ಸಾರ್ಕೆ ಹೊಳ್ವಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:30
16 ತಿಳಿವುಗಳ ಹೋಲಿಕೆ  

ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು.


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.


ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.


ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.


ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು