Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:31 - ಕನ್ನಡ ಸತ್ಯವೇದವು C.L. Bible (BSI)

31 ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತ್ಯಾ ಮಾನ್ಸಾನ್, ಕೊರ್ನೆಲ್! ದೆವಾನ್ ತುಜಿ ಮಾಗ್ನಿ ಆಯಿಕ್ಲಾ, ತಿಯಾ ಗರಿಬಾಕ್ನಿ ದಿತಲೆ ಸಗ್ಳೆ ಬಗುನ್ ದೆವಾನ್ ತುಕಾ ಧ್ಯಾನಾತ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:31
14 ತಿಳಿವುಗಳ ಹೋಲಿಕೆ  

ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.


ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು