Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:32 - ಕನ್ನಡ ಸತ್ಯವೇದವು C.L. Bible (BSI)

32 ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸಬೇಕು; ಅವನು ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿ ಅದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಸೆ ಹೊವ್ನ್ ಥೊಡ್ಯಾ ಲೊಕಾಕ್ನಿ ಜೊಪ್ಪ್ ಮನ್ತಲ್ಯಾ ಶಾರಾಕ್ ಧಾಡುನ್ ಪೆದ್ರು ಮನುನ್ ಬಲ್ವುತಲ್ಯಾ ಸಿಮಾವಾಕ್ ಯೆವ್ಕ್ ಸಾಂಗ್, ಪೆದ್ರು ಚಮ್ಡ್ಯಾಚೆ ಕಾಮ್ ಕರ್‍ತಲ್ಯಾ ಸಿಮಾವ್ ಮನ್ತಲ್ಯಾಚ್ಯಾ ಘರಾತ್ ವಸ್ತಿ ಹಾಯ್, ತೆಜೆ ಘರ್ ಸಮುಂದರಾಚ್ಯಾ ದಂಡೆಕ್ ಹಾಯ್” ಮಟ್ಲ್ಯಾ‍ನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:32
13 ತಿಳಿವುಗಳ ಹೋಲಿಕೆ  

ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


“ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.


ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.


ನೀನು ಈಗಲೇ ಜೊಪ್ಪಕ್ಕೆ ಆಳುಗಳನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.


ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು