Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:34 - ಕನ್ನಡ ಸತ್ಯವೇದವು C.L. Bible (BSI)

34 ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಪೆದ್ರುನ್ ಬೊಲ್ನೆ ಚಾಲುಕರುನ್, ದೆವ್ ಸಗ್ಳ್ಯಾಕ್ನಿಬಿ ಎಕುಚ್ ನಮುನಿ ಬಗ್ತಾ, ಮನ್ತಲೆ ಖರೆ ಮಾಕಾ ಅತ್ತಾ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:34
23 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.


ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಆಗ ಯೇಸು ಇಂತೆಂದು ಪ್ರಬೋಧಿಸಿದರು.


ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು