ಅಪೊಸ್ತಲರ ಕೃತ್ಯಗಳು 10:37 - ಕನ್ನಡ ಸತ್ಯವೇದವು C.L. Bible (BSI)37 ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೋಹಾನನು ದೀಕ್ಷಾಸ್ನಾನದ ಬಗ್ಗೆ ಬೋಧಿಸಿದ ನಂತರ ಗಲಿಲಾಯದಲ್ಲಿ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಏನು ಸಂಭವಿಸಿತೆಂಬುದನ್ನೂ ನೀವು ತಿಳಿದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಗಲಿಲಾಯಾತ್ ಶುರು ಹೊವ್ನ್ ಜುವಾಂವಾಕ್ ಬಾಲ್ತಿಮಾಚ್ಯಾ ವಿಶಯಾತ್ ಪರ್ಗಟ್ ಕರಲ್ಯಾ ಮಾನಾ ಜುದೆಯಾತ್ ಕಾಯ್ ಹೊಲೆ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.