Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:4 - ಕನ್ನಡ ಸತ್ಯವೇದವು C.L. Bible (BSI)

4 ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಕೊರ್ನೆಲಾನ್ ದೆವಾಚ್ಯಾ ದುತಾಕ್ ಬಗುನ್ ಭಿಂವ್ನ್ ಸಾಯ್ಬಾ ತುಕಾ ಕಾಯ್ ಹೊವ್ಚೆ? ಮನುನ್ ಇಚಾರ್‍ಲ್ಯಾನ್, ತೆಕಾ “ದೆವಾನ್ ತುಜಿ ಮಾಗ್ನಿಯಾ ಆಯಿಕ್ಲ್ಯಾನ್, ತಿಯಾ ಗರಿಬಾಕ್ನಿ ದಾನ್ ಧರ್ಮ್ ದಿಲ್ಲೆ ಸಗ್ಳ್ಯೆ ತೆನಿ ಬಗ್ಲಾ, ದೆವಾನ್ ತುಕಾ ಮೆಚ್ಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:4
24 ತಿಳಿವುಗಳ ಹೋಲಿಕೆ  

ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಧೂಪದ ಸುವಾಸನೆ ದೇವಜನರ ಪ್ರಾರ್ಥನೆಯೊಂದಿಗೆ ಆ ದೂತನ ಕೈಯಿಂದ ದೇವರ ಸನ್ನಿಧಿಗೆ ಏರಿಹೋಯಿತು.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.


ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.


ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.


ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.


‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.


ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II


ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು,. “ಎಲ್ಲಿ, ನಮ್ಮನ್ನು ನೋಡು,” ಎಂದನು.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು