Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:42 - ಕನ್ನಡ ಸತ್ಯವೇದವು C.L. Bible (BSI)

42 ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬದನ್ನು ಜನರಿಗೆ ಸಾರಿ ಸಾಕ್ಷಿಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಲೊಕಾಕ್ನಿ ಶಿಕಾಪಾ ಕರುಚೆ ಮನುನ್ ಜೆಜುನ್ ಅಮ್ಕಾ ಸಾಂಗಲ್ಯಾನ್, ಝಿತ್ತೆ ಹೊತ್ತ್ಯಾ ಲೊಕಾಕ್ನಿಬಿ ಅನಿ ಮರುನ್ ಗೆಲ್ಲ್ಯಾ ಲೊಕಾಕ್ನಿ ಬಿ ದೆವಾಕ್ನಾ ನಾಯ್ಯಾಧಿಪತಿ ಹೊಲ್ಲೊ ಮಾನುಸ್ ಅಪ್ನಿಚ್ ಮನ್ತಲೆ ಲೊಕಾಕ್ನಿ ಕಳ್ವು ಮನುನ್ ಅಮ್ಕಾ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:42
24 ತಿಳಿವುಗಳ ಹೋಲಿಕೆ  

ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು