Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:43 - ಕನ್ನಡ ಸತ್ಯವೇದವು C.L. Bible (BSI)

43 ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಜೆಜುಚ್ಯಾ ವರ್ತಿ ವಿಶ್ವಾಸ್ ಥವ್ತಲ್ಯಾ ಹರ್ ಎಕ್ಲ್ಯಾಚೊ ಪಾಪ್‍ ಬಿ ದೆವ್ ಜೆಜುಕ್ನಾ ಮಾಪ್ ಕರ್‍ತಾ, ಹೆ ಖರೆ ಮನುನ್ ಪ್ರವಾದ್ಯಾನಿ ಸಾಂಗ್ಲಾತ್, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:43
35 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು