Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:45 - ಕನ್ನಡ ಸತ್ಯವೇದವು C.L. Bible (BSI)

45-46 ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45-46 ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಪೆದ್ರುಚ್ಯಾ ವಾಂಗ್ಡಾ ಯೆಲ್ಲಿ ಜೊಪ್ಪಾ ಮನ್ತಲ್ಯಾ ಗಾಂವಾತ್ಲಿ ಜುದೆವ್ ವಿಶ್ವಾಸಿ ಲೊಕಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿಬಿ ಪವಿತ್ರ್ ಆತ್ಮೊ ಯೆಲ್ಲೆ ಬಗುನ್ ತೆನಿ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:45
12 ತಿಳಿವುಗಳ ಹೋಲಿಕೆ  

ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


“ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.


ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು,


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು