Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:5 - ಕನ್ನಡ ಸತ್ಯವೇದವು C.L. Bible (BSI)

5 ನೀನು ಈಗಲೇ ಜೊಪ್ಪಕ್ಕೆ ಆಳುಗಳನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ಸೀಮೋನ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬರುವುದಕ್ಕಾಗಿ ನೀನು ಜನರನ್ನು ಜೊಪ್ಪ ಪಟ್ಟಣಕ್ಕೆ ಕಳುಹಿಸು. ಸೀಮೋನನನ್ನು ‘ಪೇತ್ರ’ ಎಂತಲೂ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಇಲ್ಲಿಗೆ ಕರೆದುಕೊಂಡು ಬರಲು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅತ್ತಾ ಸಿಮಾವ್ ಮನ್ತಲ್ಯಾ ಮಾನ್ಸಾಕ್ ಬಲ್ವುನ್ ಹಾನುಕ್ ಸಾಟ್ನಿ ಲೊಕಾಕ್ನಿ ಜೊಪ್ಪ್ ಮನ್ತಲ್ಯಾ ಶಾರಾಕ್ ಧಾಡ್, ಸಿಮಾವಾಕ್ ಪೆದ್ರು ಮನುನ್‍ಬಿ ಬಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:5
10 ತಿಳಿವುಗಳ ಹೋಲಿಕೆ  

ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.


ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.


ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).


ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).


ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.


ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.


“ಪೇತ್ರನೆಂದು ಕರೆಯಲಾಗುವ ಸಿಮೋನ ಎಂಬವರು ಇಲ್ಲಿ ತಂಗಿರುವರೇ?” ಎಂದು ಕೂಗಿ ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು