Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:9 - ಕನ್ನಡ ಸತ್ಯವೇದವು C.L. Bible (BSI)

9 ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದುಸ್ರ್ಯಾ ದಿಸಿ ಹಿ ಲೊಕಾ ಜೊಪ್ಪಾ ಮನ್ತಲ್ಯಾ ಗಾಂವಾಕ್ ಜಗ್ಗೊಳ್ ಯೆಲ್ಲ್ಯಾ ದೊಪಾರ್ಚೊ ಎಳ್ ಹೊಲ್ಲೊ ತ್ಯಾ ವೆಳಾರ್ ಪೆದ್ರು ಮಾಗ್ನಿ ಕರುಕ್ ಸಾಟ್ನಿ ಘರಾಚ್ಯಾ ಮಾಳ್ಗಿ ವರ್‍ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:9
19 ತಿಳಿವುಗಳ ಹೋಲಿಕೆ  

ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.


ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು