Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:13 - ಕನ್ನಡ ಸತ್ಯವೇದವು C.L. Bible (BSI)

13 ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ - ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವದನ್ನು ಕಂಡೆನು. ಆ ದೂತನು - ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕೊರ್ನೆಲಾನ್ ಅಪ್ಲ್ಯಾ ಘರಾತ್ ದೆವಾಚೊ ದುತ್ ಇಬೆ ಹೊತ್ತೊ ಅಪ್ನಿ ಬಗಲ್ಯಾಚ್ಯಾ ವಿಶಯಾತ್ ಮಾಕಾ ಸಾಂಗ್ಲ್ಯಾನ್, ತ್ಯಾ ದೆವಾಚ್ಯಾ ದುತಾನ್ ತೆಕಾ, ಥೊಡ್ಯಾ ಲೊಕಾಕ್ನಿ ಜೊಪ್ಪಾಕ್ ಧಾಡುನ್ ಸಿಮಾವ್ ಪೆದ್ರುಕ್ ತುಜ್ಯಾಕ್ಡೆ ಬಲ್ವುನ್ ಘೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:13
11 ತಿಳಿವುಗಳ ಹೋಲಿಕೆ  

ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.


ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.


ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.


ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು