Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:26 - ಕನ್ನಡ ಸತ್ಯವೇದವು C.L. Bible (BSI)

26 ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಬಾಬಾನ್ ಥೈ ಸಾವ್ಲಾಕ್ ಹುಡ್ಕುನ್ ಕಾಡುನ್ ಅಪ್ಲ್ಯಾ ವಾಂಗ್ಡಾ ತೆಕಾ ಅಂತಿಯೊಕಾಕ್ ಬಲ್ವುನ್ ಹಾಡ್ಲ್ಯಾನ್, ತೆನಿ ದೊಗೆಬಿ ಅಂತಿಯೊಕ್ಯಾತ್ ಎಕ್ ವರ್ಸ್ ಪುರಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮೊಗಾನ್ ರಾವ್ನ್ ಲೈ ಲೊಕಾಕ್ನಿ ಶಿಕಾಪಾ ಕರ್‍ಲ್ಯಾನಿ, ಜೆಜುಚ್ಯಾ ಗೊಸ್ಟಿಯಾಂಚ್ಯಾ ಸಾರ್ಕೆ ಚಲ್ತಲ್ಯಾ ಲೊಕಾಕ್ನಿ ಕ್ರಿಸ್ತಾಂವಾ ಮನ್ತಲೆ ನಾವ್ ಯೆಲ್ಲೆ ಅಂತಿಯೊಕ್ಯಾತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:26
34 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.


ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ?


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.


ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.


ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.


ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.


ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.


ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.


ನೀವು ಯಾರಿಗೆ ಶರಣರಾಗಿದ್ದೀರೋ ಅವರ ಶ್ರೇಷ್ಠ ನಾಮವನ್ನು ದೂಷಿಸುವವರೂ ಸಿರಿವಂತರೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು