Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:27 - ಕನ್ನಡ ಸತ್ಯವೇದವು C.L. Bible (BSI)

27 ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾ ಎಳಾರ್ ಥೊಡಿ ಲೊಕಾ ಪ್ರವಾದಿಯಾ ಜೆರುಜಲೆಮಾಕ್ನಾ ಅಂತಿಯೊಕಾಕ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:27
19 ತಿಳಿವುಗಳ ಹೋಲಿಕೆ  

ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.


ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.


ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.


ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು