Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:28 - ಕನ್ನಡ ಸತ್ಯವೇದವು C.L. Bible (BSI)

28 ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹ್ಯಾ ಪ್ರವಾದ್ಯಾತ್ನಿ ಅಗಬ್! ಮನ್ತಲೊ ಎಕ್ಲೊ ಹೊತ್ತೊ, ಹೆನಿ ಅಂತಿಯೊಕ್ಯಾತ್ ಪವಿತ್ರ್ ಆತ್ಮ್ಯಾನ್ ಭರುನ್ ಸಗ್ಳ್ಯಾ ಜಗಾಕುಚ್ ಲೈ ಮೊಟೊ ಬರ್ಗಾಲ್ ಯೆತಲೊ ಹಾಯ್ ಮನುನ್ ಸಾಂಗ್ಲ್ಯಾನ್, ತೊ ಬರ್ಗಾಲ್ ಕ್ಲಾಡಿಸ್ ಮನ್ತಲ್ಯಾ ರಾಜಾಚ್ಯಾ ಎಳಾರ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:28
10 ತಿಳಿವುಗಳ ಹೋಲಿಕೆ  

ಅಲ್ಲಿ ನಾವು ಕೆಲವು ದಿನ ಇದ್ದೆವು. ಆಗ ಅಗಬ ಎಂಬ ಪ್ರವಾದಿ ನಮ್ಮನ್ನು ನೋಡಲು ಜುದೇಯದಿಂದ ಬಂದನು.


ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,


ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.


ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು