Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:30 - ಕನ್ನಡ ಸತ್ಯವೇದವು C.L. Bible (BSI)

30 ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೆನಿ ಪೈಸೆ ಜಮ್ವುನ್ ಬರ್ನಾಬಾಸ್, ಅನಿ ಸಾವ್ಲಾಕ್ಡೆ ದಿಲ್ಯಾನಿ, ಮಾನಾ ಬಾರ್ನಾಬಾಸ್ ಅನಿ ಸಾವ್ಲಾನ್ ತೆ ಪೈಸೆ ಹಾನುನ್ ಜುದೆಯಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾಕ್ನಿ ಧಾಡುನ್ ದಿಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:30
21 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.


ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.


ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.


ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.


ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು