Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:15 - ಕನ್ನಡ ಸತ್ಯವೇದವು C.L. Bible (BSI)

15 ಅವರು, “ನಿನಗೇನು ಹುಚ್ಚೇ?’ ಎಂದು ಉದ್ಗರಿಸಿದರು. ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿ ಹೇಳಿದಳು. “ಹಾಗಾದರೆ ಅದು ಅವನ ದೂತನಿರಬೇಕು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು ಅವನ ದೂತನಾಗಿರಬೇಕು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವರು, “ನಿನಗೆ ಹುಚ್ಚುಹಿಡಿದಿದೆ,” ಎಂದರು. ತಾನು ಹೇಳುವುದು ನಿಜ ಎಂದು ಆಕೆ ಒತ್ತಿ ಹೇಳುತ್ತಿರಲು ಅವರು, “ಅದು ಅವನ ದೂತನೇ ಆಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತ್ಯಾ ದೆವಾಚ್ಯಾ ಲೊಕಾನಿ “ತುಕಾ ಪಿಶೆ ಧರ್ಲಾ!” ಮಟ್ಲ್ಯಾನಿ, ಖರೆ ತಿನೆ ಅಪ್ನಿ ಸಾಂಗುಲಾಗಲೆ ಖರೆಚ್ ಮನುನ್ ಸಾಂಗ್ಲಿನ್, ತಸೆ ಹೊವ್ನ್ ತೆನಿ, ತೊ ಪೆದ್ರುಚೊ ದುತ್ ಹೊವ್ಕ್ ಫಿರೆ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:15
10 ತಿಳಿವುಗಳ ಹೋಲಿಕೆ  

“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು.


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ.


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಸುಮಾರು ಒಂದು ಗಂಟೆಕಾಲ ಕಳೆದ ಮೇಲೆ ಮತ್ತೊಬ್ಬನು, “ಖಂಡಿತವಾಗಿ ಇವನು ಕೂಡ ಯೇಸುವಿನ ಸಂಗಡ ಇದ್ದವನು. ಏಕೆಂದರೆ, ಇವನೂ ಗಲಿಲೇಯದವನೇ,” ಎಂದು ಒತ್ತಿ ಹೇಳಿದನು.


ಇತ್ತ ಪೇತ್ರನು ಬಾಗಿಲು ತಟ್ಟುತ್ತಲೇ ಇದ್ದನು. ಕೊನೆಗೆ ಅವರು ಬಂದು ಬಾಗಿಲನ್ನು ತೆರೆದರು. ಪೇತ್ರನನ್ನು ಕಂಡು ಸ್ತಬ್ಧರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು