ಅಪೊಸ್ತಲರ ಕೃತ್ಯಗಳು 12:20 - ಕನ್ನಡ ಸತ್ಯವೇದವು C.L. Bible (BSI)20 ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂತ್ಲಾ ಲೊಕಾಂಚೆರ್ ಹೆರೊದಾಕ್ ಲೈ ರಾಗ್ ಯೆಲ್ಲೊ, ತ್ಯಾ ಶಾರಾಂತ್ಲಿ ಲೊಕಾ ಹೆರೊದಾಕ್ ಲೆಕ್ ಭೆಟ್ವುಚೆ ಮನುನ್ ಗೊಳಾ ಹೊವ್ನ್ ಗೆಲಿ, ಅನಿ ಬ್ಲಾಸ್ತಾ ಮನ್ತಲ್ಯಾ ಹೆರೊದಾಚ್ಯಾ ವಯಕ್ತಿಕ್ ಸೆವಕಾಕ್ ಅಪ್ನಾಕ್ಡೆ ಕರುನ್ ಘೆಟ್ಲ್ಯಾನಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಹೆರೊದ್‍ರಾಜಾನ್ ಶಾಂತ್ಪಾನಾಚೊ ಕರಾರ್ ಕರುನ್ ಘೆವ್ಚೆ ಮನುನ್ ಸಾಂಗ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆಂಚ್ಯಾ ಗಾಂವಾಕ್ನಿ ಹೆರೊದಾಚ್ಯಾ ಗಾಂವಾಕ್ನಾಚ್ ಜೆವ್ನಾಕ್ ಪಾಜೆ ಹೊಲ್ಲೆ ಸಗ್ಳೆ ಯೆಯ್ ನ್ಹಯ್. ಅಧ್ಯಾಯವನ್ನು ನೋಡಿ |