Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:22 - ಕನ್ನಡ ಸತ್ಯವೇದವು C.L. Bible (BSI)

22 “ಮಾತನಾಡುತ್ತಿರುವವನು ಮಾನವನಲ್ಲ, ದೇವರೇ!” ಎಂದು ಜನರು ಘೋಷಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೂಡಿದ್ದ ಜನರು - ಇದು ಮನುಷ್ಯನ ನುಡಿಯಲ್ಲ, ದೇವರ ನುಡಿಯೇ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಜನರು, “ಈ ಧ್ವನಿಯು ಮನುಷ್ಯನದಲ್ಲ, ದೇವರದೇ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಇದು ಮಾನವ ಧ್ವನಿಯಲ್ಲ ದೇವರದೇ!” ಎಂದು ಜನರು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತ್ಯಾ ಲೊಕಾನಿ, “ಹಿ ಧನ್ ದೆವಾಚಿಚ್ ಮಾನ್ಸಾಚಿ ನ್ಹಯ್” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:22
9 ತಿಳಿವುಗಳ ಹೋಲಿಕೆ  

ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು