Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:23 - ಕನ್ನಡ ಸತ್ಯವೇದವು C.L. Bible (BSI)

23 ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹೆರೊದಾನ್ ಹಿ ಹೊಗ್ಳಾಪಾ ಸಗ್ಳಿ ಅಪ್ನಾಚಿಚ್ ಕರುನ್ ಘೆಟ್ಲ್ಯಾನ್, ತೆನಿ ದೆವಾಕ್ ಮಹಿಮಾ ಕರುಕ್ ನಾ ತಸೆ ಹೊವ್ನ್ ತನ್ನಾಚ್ ಧನಿಯಾಚ್ಯಾ ದೆವ್ ದುತಾನ್ ತೆಕಾ ರೊಗ್ ಯೆಯ್ ಸಾರ್ಕೆ ಕರ್‍ಲ್ಯಾನ್, ಅನಿ ತೆಚ್ಯಾ ಅಂಗಾತ್ಲಿ ಭುತ್ತುರ್‍ಲಿ ಭಾಗಾ ಕಿಡ್ಯಾನಿ ಖಾವ್ನ್ ತೊ ಮರುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:23
30 ತಿಳಿವುಗಳ ಹೋಲಿಕೆ  

ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”


ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು.


ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


“ಮಾತನಾಡುತ್ತಿರುವವನು ಮಾನವನಲ್ಲ, ದೇವರೇ!” ಎಂದು ಜನರು ಘೋಷಣೆ ಮಾಡಿದರು.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು