ಅಪೊಸ್ತಲರ ಕೃತ್ಯಗಳು 12:4 - ಕನ್ನಡ ಸತ್ಯವೇದವು C.L. Bible (BSI)4 ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್. ಅಧ್ಯಾಯವನ್ನು ನೋಡಿ |