Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:5 - ಕನ್ನಡ ಸತ್ಯವೇದವು C.L. Bible (BSI)

5 ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪೆದ್ರು ಬಂದಿಖಾನ್ಯಾತ್ ರಾತಾನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ತೆಚ್ಯಾ ಸಾಟ್ನಿ ಪುರಾ ಮನ್ ದಿವ್ನ್ ಮಾಗ್ನಿ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:5
12 ತಿಳಿವುಗಳ ಹೋಲಿಕೆ  

ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಹೀಗೆ ತನ್ನ ಪರಿಸ್ಥಿತಿಯನ್ನು ಅರಿತ ಬಳಿಕ ಪೇತ್ರನು ಮರಿಯ ಎಂಬುವಳ ಮನೆಗೆ ಹೋದನು. ಈಕೆ ‘ಮಾರ್ಕ’ ಎಂದು ಹೆರಸರುಗೊಂಡಿದ್ದ ಯೊವಾನ್ನನ ತಾಯಿ. ಆ ಮನೆಯಲ್ಲಿ ಹಲವಾರು ಜನರು ಸೇರಿ ಪ್ರಾರ್ಥನೆ ಮಾಡುತ್ತಿದ್ದರು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು