Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:6 - ಕನ್ನಡ ಸತ್ಯವೇದವು C.L. Bible (BSI)

6 ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪೆದ್ರು ದೊನ್ ಸೈನಿಕಾಂಚ್ಯಾ ಮದ್ದಿ ನಿಜಲೊ ಹೊತ್ತೊ, ಅನಿ ತೆಕಾ ದೊನ್ ಸರ್ಪೊಳಿಯಾನಿ ಭಾಂದಲೆ ಹೊತ್ತೆ, ತನ್ನಾ ರಾತ್ ಹೊಲ್ಲಿ ಅನಿ ಲೈ ಲೊಕಾ ಸೈನಿಕಾ ಧಾರಾತ್‍ ಬಿ ರಾಕಿತ್ ಹೊತ್ತಿ, ದುಸ್ರೆಂದಿಸಾ ಪೆದ್ರುಕ್ ಲೊಕಾಂಚ್ಯಾ ಇದ್ರಾಕ್ ಹಾನುಚೆ ಮನುನ್ ಹೆರೊದಾನ್ ಯೆವ್ವುನ್ ಘೆವ್ನ್ ಹೊತ್ತ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:6
17 ತಿಳಿವುಗಳ ಹೋಲಿಕೆ  

ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.


ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.


“ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು.


ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು