Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:7 - ಕನ್ನಡ ಸತ್ಯವೇದವು C.L. Bible (BSI)

7 ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಎಗ್ದಮ್, ಧನಿಯಾಚೊ ದುತ್ ಥೈ ಇಬೆ ರ್‍ಹಾಲೊ, ತ್ಯಾ ಖೊಲಿತ್ ಉಜ್ವೊಡ್ ಹೊಲೊ, ದೆವ್ ದುತಾನ್ ಪೆದ್ರುಕ್ ಆಪ್ಡುನ್ ಉಟ್ವುನ್ “ಲಗ್ಗುನಾ ಉಟ್!” ಮಟ್ಲ್ಯಾನ್, ತನ್ನಾ ತಾಬೊಡ್ತೊಬ್ ತೆಚ್ಯಾ ಹಾತಿಚಿ ಸರ್ಪೊಳಿಯಾ ಸುಟುನ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:7
37 ತಿಳಿವುಗಳ ಹೋಲಿಕೆ  

ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II


ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.


ಇದ್ದಕ್ಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷ ಆಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಅವನು ಅಲ್ಲಿಂದ ಪ್ರಯಾಣಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು.


ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಬಳಿಕ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಕೂಡಲೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟಮಾಡು,” ಎಂದು ಹೇಳಿದನು.


ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.


ಹೇ ಸರ್ವೇಶ್ವರಾ, ನೀನೆನಗೆ ಜ್ಯೋತಿ ಕತ್ತಲನು ನೀಗಿಸಿ, ಬೆಳಕನು ನೀಡುತಿ.


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು