ಅಪೊಸ್ತಲರ ಕೃತ್ಯಗಳು 13:11 - ಕನ್ನಡ ಸತ್ಯವೇದವು C.L. Bible (BSI)11 ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಬಕ್, ಧನಿಯಾ ಹಾತ್ ತುಕಾ ವೈರ್ ಹೊವ್ನ್ ಉಟೈತಿಲ್,ಉಲ್ಲೊ ಯೆಳ್ ತುಕಾ ಕಾಯ್ಬಿ ದಿಸಿನಾ, ತಿಯಾ ಕುಡ್ಡೊ ಹೊತೈ, ದಿಸಾಚೊ ಉಜ್ವೊಡ್ಬಿ ತಿಯಾ ಬಗುಕ್ ಹೊಯ್ನಾ ಮಟ್ಲ್ಯಾನ್ ತನ್ನಾ ತಾಬೊಡ್ತೊಬ್ ಎಲಿಯಾಕ್ ಸಗ್ಳೆಬಿ ಕಾಳೊಕ್ ಹೊವ್ನ್ ಗೆಲೆ, ಕೊನ್ ತರ್ ಬಿ ಅಪ್ನಾಕ್ ಹಾತ್ ಧರುನ್ ಚಲ್ವುಂದಿತ್ ಮನುನ್ ತಳ್ಮಳ್ಲ್ಯಾನ್. ಅಧ್ಯಾಯವನ್ನು ನೋಡಿ |