Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:17 - ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಭಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡು ನಮ್ಮ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸ್ರಾಯೆಲಾಂಚ್ಯಾ ದೆವಾನ್ ಅಮ್ಚ್ಯಾ ಪುರ್ವಜ್ ಲೊಕಾಕ್ನಿ ಎಚುನ್ ಘೆಟ್ಲ್ಯಾನ್ ಇಜಿಪ್ತಾತ್ ಪ್ರವಾಸ್ ಗೆಲ್ಯಾಂಚ್ಯಾ ಸಾರ್ಕೆ ಹೊತ್ತ್ಯಾ ಅಪ್ಲ್ಯಾ ಲೊಕಾಕ್ನಿ ದೆವಾನ್ ಮಜ್ಜತ್ ಕರುನ್ ತೆಂಕಾ ಬರೆ ಕರ್‍ಲ್ಯಾನ್, ದೆವಾನ್ ಮೊಟೊ ದೆಶ್ ಹೊವ್ನ್ ಕರ್‍ಲ್ಯಾನ್, ಅನಿ ಅಪ್ಲ್ಯಾ ಮೊಟ್ಯಾ ಬಳಾನ್ ತೆಂಕಾ ತ್ಯಾ ದೆಶ್ಯಾತ್ನಾ ಚಾಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:17
42 ತಿಳಿವುಗಳ ಹೋಲಿಕೆ  

ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


“ಕೇಳೀಗ ನನ್ನ ದಾಸ ಯಕೋಬೇ, ನಾನು ಆರಿಸಿಕೊಂಡ ಇಸ್ರಯೇಲೇ,


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು