Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:2 - ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ಸಗ್ಳ್ಯಾನಿ ಧನಿಯಾಚಿ ಸೆವಾಕರಿತ್, ಅನಿ ಉಪ್ಪಾಸಿ ರಾವ್ನ್ ಮಾಗ್ನಿ ಕರಿತ್, ತನ್ನಾ ಪವಿತ್ರ್ ಆತ್ಮ್ಯಾನ್ ತೆಂಕಾ, “ಬಾರ್ನಾಬಾಸಾಕ್ ಅನಿ ಸಾವ್ಲಾಕ್ ವಿಶೆಸ್ ಕರುನ್ ಯೆಗ್ಳೆಚ್ ಥವಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:2
41 ತಿಳಿವುಗಳ ಹೋಲಿಕೆ  

ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ,


ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.


ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.


ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಸರ್ವೇಶ್ವರನ ಮಂಜೂಷದ ಮುಂದೆ ದೇವರ ಆರಾಧನೆ ಮಾಡುವುದಕ್ಕಾಗಿ ದಾವೀದನು ಕೆಲವು ಮಂದಿ ಲೇವಿಯರನ್ನು ನೇಮಿಸಿದನು.


ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ),” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು