Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:20 - ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು. “ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸುಮಾರ್ ಚಾರ್ಸೆಪನ್ನಾಸ್ ವರ್ಸಾಂಚ್ಯಾ ಯೆಳಾತ್ ಹೆ ಸಗ್ಳೆ ಹೊಲೆ, ಹೆ ಸಗ್ಳೆ ಹೊಲ್ಲ್ಯಾ ಮಾನಾ ಪ್ರವಾದಿ ಸಾಮುಯೆಲಾಚ್ಯಾ ಯೆಳಾ ಪತರ್ಬಿ ದೆವಾನ್ ಅಮ್ಚ್ಯಾ ಲೊಕಾಕ್ನಿ ನ್ಯಾಯ್ ಕರ್‍ತಲೊ ಮಾನುಸ್ ದಿಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:20
9 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”


ಇಂಥ ಪಾಸ್ಕಹಬ್ಬವು ಇಸ್ರಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಯೇಲರ ಮತ್ತು ಜುದೇಯದ ಅರಸರ ಕಾಲದಲ್ಲಾಗಲಿ ನಡೆದಿರಲಿಲ್ಲ.


ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು