Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:30 - ಕನ್ನಡ ಸತ್ಯವೇದವು C.L. Bible (BSI)

30 ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ತೆಕಾ ದೆವಾನ್ ಮರಲ್ಯಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:30
16 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಅವರೇ ಹೇಳಿದಂತೆ ಪುನರುತ್ಥಾನ ಹೊಂದಿದ್ದಾರೆ. ಬನ್ನಿ, ಅವರನ್ನಿಟ್ಟಿದ್ದ ಸ್ಥಳವನ್ನು ನೋಡಿ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಆದರೆ ದೇವರು ಅವರನ್ನು ಮೂರನೆಯ ದಿನ ಪುನರುತ್ಥಾನಗೊಳಿಸಿ ಪ್ರತ್ಯಕ್ಷರಾಗುವಂತೆ ಮಾಡಿದರು.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


“ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ.


ಅದಕ್ಕೆ ಯೇಸು, ‘ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’


ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುಸ್ವಾಮಿ ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು