Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:32 - ಕನ್ನಡ ಸತ್ಯವೇದವು C.L. Bible (BSI)

32-33 ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32-33 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಎಬ್ಬಿಸಿದ್ದರಲ್ಲಿ - ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ದೆವಾನ್ ಅಮ್ಚ್ಯಾ ಪುರ್ವಜ್ ಲೊಕಾಕ್ನಿ ಗೊಸ್ಟ್ ದಿಲ್ಲ್ಯಾ ವಿಶಯಾಚೆ ಬರಿ ಖಬರ್ ಅಮಿ ತುಮ್ಕಾ ಸಾಂಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:32
40 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


“ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರಗ್ರಂಥದಲ್ಲಿ ವಾಗ್ದಾನಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು