Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:34 - ಕನ್ನಡ ಸತ್ಯವೇದವು C.L. Bible (BSI)

34 “ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬದರ ವಿಷಯದಲ್ಲಿ ದೇವರು ಹೇಳಿರುವದೇನಂದರೆ - ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ, ಅವು ನಂಬಿಕೆಯಾದವುಗಳೇ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ದೆವಾನ್ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಮಿಯಾ ದಾವಿದಾಕ್ ಕರಲ್ಲಿ ಖರ್ಯ್ಯಾಚಿ ಗೊಸ್ಟಿಯಾ ಅನಿ ಪವಿತ್ರ್ ಹೊವ್ನ್ ಹೊತ್ತಿ ಗೊಸ್ಟಿಯಾ ದಾಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:34
18 ತಿಳಿವುಗಳ ಹೋಲಿಕೆ  

ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.


ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುಸ್ವಾಮಿ ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು