ಅಪೊಸ್ತಲರ ಕೃತ್ಯಗಳು 13:38 - ಕನ್ನಡ ಸತ್ಯವೇದವು C.L. Bible (BSI)38-39 “ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38-39 ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತಸೆಹೊವ್ನ್ ಮಾಜ್ಯಾ ಭಾವಾನು ಅನಿ ಭೆನಿಯಾನು ತುಮ್ಕಾ ಜೆಜುಕ್ನಾಚ್ ಪಾಪಾಕ್ ಕ್ಷಮಾ ಗಾವ್ತಾ ಮನುನ್ ಸಾಂಗುನ್ ಹೊಲಾ ಮನ್ತಲೆ ಮಿಯಾ ತುಮ್ಕಾ ಕಳ್ವುತಾ. ಅಧ್ಯಾಯವನ್ನು ನೋಡಿ |