Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:4 - ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬಾನಾಬಾಸಾಕ್ ಅನಿ ಸಾವ್ಲಾಕ್ ಪವಿತ್ರ್ ಆತ್ಮ್ಯಾನುಚ್ ಧಾಡುನ್ ದಿಲ್ಯಾನ್, ತೆನಿ ಸಿಲಿಸಿಯಾ ಮನ್ತಲ್ಯಾ ಶಾರಾಕ್ ಗೆಲೆ, ಮಾನಾ ತೆನಿ ಸಿಲಿಸಿಯಾಕ್ನಾ ಢೊನಾತ್ನಾ ಸೈಪ್ರಸ್ ದ್ವಿಪಾಕ್ ಜಾವ್ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:4
7 ತಿಳಿವುಗಳ ಹೋಲಿಕೆ  

ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.


ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು