Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:43 - ಕನ್ನಡ ಸತ್ಯವೇದವು C.L. Bible (BSI)

43 ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಬೈಟಕ್ ಸರಲ್ಲ್ಯಾ ಮಾನಾ ಲೈ ಜುದೆವಾಂಚಿ ಲೊಕಾ ಅನಿ ಜುದೆವ್ ನ್ಹಯ್ ಹೊತ್ತಿ ಲೊಕಾಬಿ ಥೈತ್ನಾ ಪಾವ್ಲು ಅನಿ ಬಾರ್ನಾಬಾಂಚ್ಯಾ ವಾಂಗ್ಡಾ ಗೆಲಿ, ತನ್ನಾ ತೆಂಕಾ ದೆವಾಚ್ಯಾ ಕುರ್ಪೆತ್ ಫಿಡೆ ಜಾವ್ಕ್ ಉಮ್ಮೆದ್ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:43
39 ತಿಳಿವುಗಳ ಹೋಲಿಕೆ  

ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.


ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.


ಅಂತೆಯೇ ಅವರನ್ನು ಬಿಟ್ಟು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದ ತೀತಯುಸ್ತ ಎಂಬವನ ಮನೆಗೆ ಹೋದನು. ಅವನ ಮನೆ ಪ್ರಾರ್ಥನಾಮಂದಿರದ ಪಕ್ಕದಲ್ಲೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು